- Advertisement -
- Advertisement -



ಕೇರಳ : ರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಮತ್ತು ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ( 67) ನಿಧನರಾಗಿದ್ದಾರೆ. ಇಂದು(ಜ.30) ಮುಂಜಾನೆ ತಮ್ಮ ನಿವಾಸದಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಶ್ರೀನಿವಾಸನ್‌ರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಲಪ್ಪುರಂ ಜಿಲ್ಲೆಯ ಪೊನ್ನಾನಿಯವರಾದ ಶ್ರೀನಿವಾಸನ್ 1991ರಲ್ಲಿ ಉಷಾರನ್ನು ವಿವಾಹವಾಗಿದ್ದರು. ಕೇಂದ್ರ ಸರ್ಕಾರದ ಮಾಜಿ ಉದ್ಯೋಗಿಯಾಗಿದ್ದ ಶ್ರೀನಿವಾಸನ್ ರಾಷ್ಟ್ರೀಯ ಕಬಡ್ಡಿ ಆಟಗಾರರೂ ಆಗಿದ್ದರು.ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
- Advertisement -








