Friday, May 10, 2024
spot_imgspot_img
spot_imgspot_img

ವಿಟ್ಲ: ಪಡಿಬಾಗಿಲು ಹಿ.ಪ್ರಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

- Advertisement -G L Acharya panikkar
- Advertisement -

ವಿಟ್ಲ: ದ.ಕ.ಜಿ.ಪಂ.ಹಿ. ಪ್ರಾ. ಶಾಲೆ ಪಡಿಬಾಗಿಲು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.

ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಕೇಪು ಗ್ರಾ.ಪಂ ಸದಸ್ಯರುಗಳು, ಪೋಷಕ ವೃಂದದವರು, SDMCಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಊರ ವಿದ್ಯಾಭಿಮಾನಿಗಳು, ಶಿಕ್ಷಕ ವೃಂದದವರು ಮೆರವಣಿಗೆಯಲ್ಲಿ ಭಾಗವಹಿಸಿದರು. ಎಲ್ಲಾ ಮಕ್ಕಳನ್ನು ಹೂ ಕೊಟ್ಟು ಸ್ವಾಗತಿಸಲಾಯಿತು.

ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಿದ್ಯಾಸಿರಿ ಶಿಕ್ಷಣ ಕೇಂದ್ರದ ಗೌರವಾಧ್ಯಕ್ಷರಾದ ಲಿಂಗಪ್ಪ ಗೌಡ ವಹಿಸಿದರು. ಮುಖ್ಯ ಅತಿಥಿಯಾಗಿ ಕೇಪು ಗ್ರಾಮ ಪಂಚಾಯತ್‌ ಸದಸ್ಯ ಜಗಜ್ಜೀವನ್‌ ರಾವ್‌ ಭಾಗವಹಿಸಿದರು. ಶಾಲಾ SDMC ಅಧ್ಯಕ್ಷೆ ವಿಶಾಲಾಕ್ಷಿ, ಸದಸ್ಯ ಜನಾರ್ಧನ, ವಿಜಯ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಆರ್‌ಕೆ ಕಲಾ ಸಂಸ್ಥೆ ನಿರ್ದೇಶಕರು ರಾಜೇಶ ವಿಟ್ಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು .

2023-24ನೇ ಶೈಕ್ಷಣಿಕ ವರ್ಷದ ಸರಕಾರದಿಂದ ಕೊಡಲ್ಪಟ್ಟ ಪಠ್ಯ ಪುಸ್ತಕ ಮತ್ತು ಸಮವಸ್ತ್ರಗಳನ್ನು ಮಕ್ಕಳಿಗೆ ವಿತರಿಸಲಾಯಿತು. 8ನೇ ತರಗತಿಯ NMMS ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿನಿ ಕುಮಾರಿ . ಫಾತಿಮತ್‌ ಸಮ್ಮ ಇವಳನ್ನು ಶಾಲಾ ಪರವಾಗಿ ಗೌರವಿಸಲಾಯಿತು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ.ಕೆ ರೈ ಸ್ವಾಗತಿಸಿ, ಸಹಶಿಕ್ಷಕ ಲಲಿತ.ಕೆ ಇವರು ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪೋಷಕ ವೃಂದದವರು, ಊರ ವಿದ್ಯಾಭಿಮಾನಿಗಳು, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಬಾಗವಹಿಸಿದರು.

- Advertisement -

Related news

error: Content is protected !!