Saturday, April 27, 2024
spot_imgspot_img
spot_imgspot_img

ವಿಟ್ಲ: ಪಡಿಬಾಗಿಲು ವಿದ್ಯಾಗಿರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳ್ಳಿಹಬ್ಬ ಸಂಭ್ರಮ

- Advertisement -G L Acharya panikkar
- Advertisement -

ವಿಟ್ಲ: ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇದರ ಬೆಳ್ಳಿ ಹಬ್ಬ ಮತ್ತು ಶಾಲಾ ವಾರ್ಷಿಕೋತ್ಸವ, ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಸನ್ಮಾನ ಕಾರ್ಯಕ್ರಮವು ಡಿ.30 ರಂದು ನಡೆಯಿತು.

ಬೆಳಿಗ್ಗೆ 9.30ಕ್ಕೆ ಪಡಿಬಾಗಿಲು ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ವಿಶಾಲಾಕ್ಷಿ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ದೀಪ ಪ್ರಜ್ವಲನೆಗೈದರು. ಕೇಪು ಗ್ರಾ.ಪಂ.ಅಧ್ಯಕ್ಷ ರಾಘವ ಸಾರಡ್ಕ ಅಧ್ಯಕ್ಷತೆ ವಹಿಸಿದ್ದರು. ಅಳಿಕೆ ಶ್ರೀಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಕೆ.ಎಸ್ ಕೃಷ್ಣ ಭಟ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.

ಮುಖ್ಯ ಅತಿಥಿಗಳಾಗಿ ಕೇಪು ಗ್ರಾ.ಪಂ.ಸದಸ್ಯರಾದ ಪುರುಷೋತ್ತಮ ಗೌಡ ಕಲ್ಲಂಗಳ, ಜಗಜ್ಜೀವನ್ ರಾಮ್ ಶೆಟ್ಟಿ, ಕೃಷ್ಣಯ್ಯ ಕೆ.ವಿಟ್ಲ ಅರಮನೆ, ಪಡಿಬಾಗಿಲು ಶಾಲೆಯ ವಿದ್ಯಾಸಿರಿ ಶಿಕ್ಷಣಕೇಂದ್ರದ ಅಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ, ಗೌರವಾಧ್ಯಕ್ಷ ಲಿಂಗಪ್ಪ ಗೌಡ ಅಳಿಕೆ, ಕಾರ್ಯದರ್ಶಿ ಜಿನಚಂದ್ರ, ಭಾಸ್ಕರ ಅಡ್ವಳ, ಹಳೆ ವಿದ್ಯಾರ್ಥಿ ಸುಪ್ರೀತ್ ಶೆಟ್ಟಿ, ಸಂಗಮ ಯುವಕ ಮಂಡಲದ ಉಪಾಧ್ಯಕ್ಷರಾದ ರಾಘವ ಮೈರ, ರಾಧಾಕೃಷ್ಣ ಚೆಲ್ಲಡ್ಕ, ಕುದ್ದುಪದವು ಉದಯಗಿರಿ ಸಮೂಹ ಸಂಪನ್ಮೂಲ ವ್ಯಕ್ತಿ ಪುಷ್ಪಾ ಬಲ್ಲಾಳ್ ಭಾಗವಹಿಸಿದ್ದರು.

ಸನ್ಮಾನ ಕಾರ್ಯಕ್ರಮ
ಇಪ್ಪತೈದು ವರ್ಷಗಳಿಂದ ಕಾರ್ಯನಿರ್ವಹಿಸಿದ ಶಿಕ್ಷಕರಿಗೆ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಶಾಲೆಯ ಸ್ಥಾಪನೆಗೆ ಸಹಕಾರ ನೀಡಿದ ಬಾಬು ಪಾಟಾಳಿಯವರಿಗೆ, ವಿಶೇಷ ಸಾಧನೆ ಮಾಡಿದ ಪ್ರಸ್ತುತ ಮತ್ತು ಹಳೆ ವಿದ್ಯಾರ್ಥಿಗಳಿಗೆ, ಅಡುಗೆ ಸಿಬ್ಬಂದಿಗಳಿಗೆ , ಎಸ್‌ಡಿಎಮ್‌ಸಿ ಮಾಜಿ ಅಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಬಳಿಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.

ಲಿಂಗಪ್ಪ ಗೌಡ ಸ್ವಾಗತಿಸಿ, ಲಲಿತ ಕೆ ವಂದಿಸಿದರು. ಪುಷ್ಪಾವತಿ ಎಮ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

- Advertisement -

Related news

error: Content is protected !!