Saturday, April 27, 2024
spot_imgspot_img
spot_imgspot_img

ವಿಟ್ಲ: (ಡಿ.30) ದ.ಕ.ಹಿ.ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇದರ ಬೆಳ್ಳಿ ಹಬ್ಬ ಮತ್ತು ಶಾಲಾ ವಾರ್ಷಿಕೋತ್ಸವ

- Advertisement -G L Acharya panikkar
- Advertisement -

ವಿಟ್ಲ: ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇದರ ಬೆಳ್ಳಿ ಹಬ್ಬ ಮತ್ತು ಶಾಲಾ ವಾರ್ಷಿಕೋತ್ಸವ, ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಸನ್ಮಾನ ಕಾರ್ಯಕ್ರಮವು ದಿನಾಂಕ 30-12-2023ನೇ ಶನಿವಾರದಂದು ನಡೆಯಲಿದೆ.

ಬೆಳಿಗ್ಗೆ 9.30ಕ್ಕೆ ಪಡಿಬಾಗಿಲು ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ವಿಶಾಲಾಕ್ಷಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಲಘು ಉಪಹಾರ ನಡೆಯಲಿದೆ. ನಂತರ ನಡೆಯುವ ಸಭಾಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ದೀಪ ಪ್ರಜ್ವಲನೆಗೈಯಲಿದ್ದಾರೆ. ಕೇಪು ಗ್ರಾ.ಪಂ.ಅಧ್ಯಕ್ಷ ರಾಘವ ಸಾರಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಬಂಟ್ವಾಳ ತಾ.ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ಎಮ್.ಜಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಪು ಗ್ರಾ.ಪಂ.ಸದಸ್ಯರಾದ ಪುರುಷೋತ್ತಮ ಗೌಡ ಕಲ್ಲಂಗಳ, ಜಗಜ್ಜೀವನ್ ರಾಮ್ ಶೆಟ್ಟಿ, ಮೋಹಿನಿ, ವಿಶಾಲಾಕ್ಷಿ, ಅಳಿಕೆ ಶ್ರೀಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಕೆ.ಎಸ್ ಕೃಷ್ಣ ಭಟ್, ಕೃಷ್ಣಯ್ಯ ಕೆ.ವಿಟ್ಲ ಅರಮನೆ, ಬಂಟ್ವಾಳ ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ಶ್ರೀಮತಿ ಸುಧಾ, ಪಡಿಬಾಗಿಲು ಶಾಲೆಯ ವಿದ್ಯಾಸಿರಿ ಶಿಕ್ಷಣಕೇಂದ್ರದ ಅಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ, ಗೌರವಾಧ್ಯಕ್ಷ ಲಿಂಗಪ್ಪ ಗೌಡ ಅಳಿಕೆ, ಕಾರ್ಯದರ್ಶಿ ಜಿನಚಂದ್ರ ಭಾಗವಹಿಸಲಿದ್ದಾರೆ.

ಶಾಲಾ ಮಕ್ಕಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಸಹಭೋಜನ ನಡೆಯಲಿದೆ.

ಸಂಜೆ 4.00 ರಿಂದ LKG, UKG ಹಾಗೂ ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸಂಜೆ 6.30 ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ದ.ಕ.ಜಿ.ಪಂ.ಹಿ.ಪ್ರಾ. ಪಡಿಬಾಗಿಲು ಶಾಲೆಯ ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ವಿಧಾನ ಸಭಾ ಕ್ಷೇತ್ರ ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಹಾಗೂ ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವ ಸಾರಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೇಪು ಗ್ರಾಮ ಪಂಚಾಯತ್ ಸದಸ್ಯ ಪುರುಷೋತ್ತಮ ಗೌಡ ಮತ್ತು ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ ” ಚಿಗುರು ಹಸ್ತ” ಪತ್ರಿಕೆ ಬಿಡುಗಡೆ ಮಾಡಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅಮೈ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕೇಪು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶ್ರೀನಿವಾಸ ರೈ ಕುಂಡಕೋಳಿ , ಪಡಿಬಾಗಿಲು ಶಾಲೆ ಬೆಳ್ಳಿಹಬ್ಬ ಸಮಿತಿ ಗೌರವಾಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್, ಬಂಟ್ವಾಳ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್, ಬಂಟ್ವಾಳ ಶಾಲಾ ಶಿಕ್ಷಣ ಇಲಾಖೆ ಸಂಯೋಜಕ ಸುಜಾತ, ಪುಷ್ಪಾ ಬಲ್ಲಾಳ್ ಸಮೂಹ ಸಂಪನ್ಮೂಲ ವ್ಯಕ್ತಿ ಉದಯಗಿರಿ ಕುದ್ದುಪದವು ಗೌರವ ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಬಳಿಕ ಶಾಲಾ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಮುಂದುವರೆಯಲಿದೆ.

- Advertisement -

Related news

error: Content is protected !!