Tuesday, June 16, 2026
spot_imgspot_img
spot_imgspot_img

ವಿದ್ಯಾಗಮ ಶಿಕ್ಷಕಿ ಪದ್ಮಾಕ್ಷಿ ಕೊರೋನಾಗೆ ಬಲಿ

- Advertisement -
- Advertisement -

ಮೂಡುಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿಯೊಬ್ಬರು ಕೊರೋನಾಗೆ ಬಲಿಯಾಗಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ನೆಹರೂ ಮಕ್ಕಿ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿ ಪದ್ಮಾಕ್ಷಿ ಕೊರೋನಾಗೆ ಬಲಿಯಾದವರು. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಅವರಿಗೆ ಸೆ.29ರಂದು ಕೋವಿಡ್-19 ದೃಢಪಟ್ಟು, ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದರು.


ಪದ್ಮಾಕ್ಷಿ ಅವರ ಪತಿಗೂ ಕೊರೋನಾ ಸೋಂಕು ತಗುಲಿತ್ತು. ಪದ್ಮಾಕ್ಷಿ ಅವರ ಪುತ್ರಿ ಐಶ್ವರ್ಯಾ ಅವರು ಸಂಕಷ್ಟಕ್ಜೆ ನೆರವಾಗುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಚಿಕಿತ್ಸಾ ವೆಚ್ಚ ಭರಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಚಿಕಿತ್ಸೆ ಪಡೆಯಲು ಪದ್ಮಾಕ್ಷಿ ಅವರೇ ಇಲ್ಲ.

- Advertisement -

Related news

error: Content is protected !!