Saturday, June 6, 2026
spot_imgspot_img
spot_imgspot_img

ಪಡುಬಿದ್ರಿ: ಸ್ಕೂಟರ್‌ಗೆ ಬಸ್ ಡಿಕ್ಕಿ; ಸವಾರ ಮೃತ್ಯು..!

- Advertisement -
- Advertisement -

ಪಡುಬಿದ್ರಿ: ದ್ವಿಚಕ್ರವಾಹನಕ್ಕೆ ಬಸ್ ಢಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಪಲಿಮಾರು ಬಳಿ ನಡೆದಿದೆ.

ಮೃತಪಟ್ಟ ಯುವಕ ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು (17) ಎಂದು ಗುರುತಿಸಲಾಗಿದೆ.

ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ನಾಟಕ ನೋಡಲು ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಯುವಕನ್ನು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ತುಷಾರ್ ಪಲಿಮಾರು ಹಾಗೂ ಕೌಶಿಕ್ ಎರ್ಮಾಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರ್ಕಳ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಅಪಘಾತವು ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟಿಯು ಹಾನಿಗೊಳಗಾಗಿದೆ.

- Advertisement -

Related news

error: Content is protected !!