Sunday, June 14, 2026
spot_imgspot_img
spot_imgspot_img

ಪಡುಬಿದ್ರಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

- Advertisement -
- Advertisement -

ಪಡುಬಿದ್ರಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಹೆಜಮಾಡಿ ಕಡವಿನ ಬಾಗಿಲು ನಿವಾಸಿ ಪ್ರಕಾಶ (43) ಎಂದು ಗುರುತಿಸಲಾಗಿದೆ.

ನ. 4ರಿಂದ ನ. 5ರ ಮಧ್ಯಾಹ್ನದ ನಡುವಿನ ಅವಧಿಯಲ್ಲಿ ಮನೆಯ ಕಬ್ಬಿಣದ ಜಂತಿಗೆ ನೈಲಾನ್‌ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರಿಗೆ ವಿಪರೀತ ಮದ್ಯ ಸೇವನೆಯ ಚಟವಿದ್ದು ಪತ್ನಿ ಹಾಗೂ ಮಕ್ಕಳು ಬೇರೆಯೇ ವಾಸವಿದ್ದರು. ಜೀವನದಲ್ಲಿನ ಜುಗುಪ್ಸೆಯಿಂದ ಈ ಕೃತ್ಯವೆಸಗಿರಬಹುದೆಂದು ಪಡುಬಿದ್ರಿ ಪೊಲೀಸ್‌ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!