- Advertisement -
- Advertisement -




ಪಡುಬಿದ್ರೆ: ಹೆಜಮಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ ಬೀದಿಯ ಶೀಥಲ್, ಕಾಳಿಯಮ್ಮ ಹಾಗೂ ಮಾರಿ ಬಂಧಿತ ಆರೋಪಿಗಳು.
ಡಿ. 25ರಂದು ಸಂಜೆ ದೈವಸ್ಥಾನದ ಆಡಳಿತ ಮಂಡಳಿಯವರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮೂರು ಅಪರಿಚಿತ ಮಹಿಳೆಯರು ಕಮಲ ಅವರಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಗಮನಕ್ಕೆ ಬಾರದೆ ಕುತ್ತಿಗೆಯಲ್ಲಿದ್ದ ಸುಮಾರು 3 ಪವನ್ ಚಿನ್ನದ ಸರವನ್ನು ಕಳವು ಮಾಡಿರುವುದು ಕಂಡುಬಂದಿದೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು, ಮೂವರು ಆರೋಪಿಗಳನ್ನು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
- Advertisement -








