- Advertisement -
- Advertisement -





ಪಡುಬಿದ್ರಿ: ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪಾದೆಬೆಟ್ಟು ಗ್ರಾಮದ ಸುಮತಿ(65) ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸುಮತಿ ಎಂಬವರು ಜೀವನದಲ್ಲಿ ಜಿಗುಪ್ಪೆಗೊಂಡು ಆ.30ರಂದು ನಸುಕಿನ ವೇಳೆ ಮನೆಯ ಪಕ್ಕದ ದನದ ಹಟ್ಟಿಯಲ್ಲಿನ ಮರದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








