




ಪದ್ಯಾಣ: ಏಪ್ರಿಲ್ 6 ಸೋಮವಾರ ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, ಅಧಿವಾಸ ಮಂಟಪದಲ್ಲಿ ಬೆಳಗ್ಗಿನ ಪೂಜೆ, ಕವಾಟೋದ್ಘಾಟನೆ, ಶ್ರೀ ಮಹಾಲಿಂಗೇಶ್ವರ ದೇವರಿಗೆ ಪಂಚಾಮೃತಾಭಿಷೇಕ ಸೇರಿದಂತೆ ವಿವಿಧ ಕಲಶಾಭಿಷೇಕಗಳು ನಡೆಯಲಿವೆ. ಶತರುದ್ರ ಸಹಿತ ಬ್ರಹ್ಮ ಕುಂಭಾಭಿಷೇಕ, ಮಂತ್ರ ನ್ಯಾಸಾದಿಗಳು, ಮಹಾಬಲಿ ಪೀಠ ಪ್ರತಿಷ್ಠೆ, ಮಹಾಮಂಗಳಾರತಿ, ವೈದಿಕ ಮಂತ್ರಾಕ್ಷತೆ ಹಾಗೂ ಸಂತರ್ಪಣೆ ಕಾರ್ಯಕ್ರಮಗಳು ನೆರವೇರಲಿವೆ.
ಸಂಜೆ 5 ಗಂಟೆಯಿಂದ ದೀಪಾರಾಧನೆ, ರಾತ್ರಿ ಪೂಜೆ, ದೊಡ್ಡ ರಂಗ ಪೂಜೆ, ಉತ್ಸವ ಬಲಿ ಹಾಗೂ ಕಟ್ಟೆಪೂಜೆ ನಡೆಯಲಿವೆ.
ಬೆಳಿಗ್ಗೆ 8.30ರಿಂದ 10.30ರವರೆಗೆ ಶ್ರೀ ಜಲದುರ್ಗಾಪರಮೇಶ್ವರೀ ಭಜನಾ ಮಂಡಳಿ ಪಡ್ಪು, ಆನೆಕಲ್ಲು ಹಾಗೂ ಶ್ರೀ ಅಯ್ಯಪ್ಪ ಭಜನಾ ಮಂಡಳಿ ಗುಂಡಮಜಲು ಇವರಿಂದ ಭಜನೆ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9.30ರಿಂದ ಶ್ರೀ ಗಣಪತಿ ಪದ್ಯಾಣ ಮತ್ತು ಬಳಗದವರಿಂದ “ಶಿವಾನುಗ್ರಹ” ಕಾವ್ಯವಾಚನ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 2.30ರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ “ಸಂಗೀತ ಗಾನಸಂಭ್ರಮ” ಕಾರ್ಯಕ್ರಮ ಆಯೋಜಿಸಲಾಗಿದೆ.
ಸಂಜೆ 4.30ರಿಂದ ಸುಧರ್ಮ ಸಭೆ ನಡೆಯಲಿದ್ದು, ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರುದೇವದತ್ತ ಸಂಸ್ಥಾನಂ, ಒಡಿಯೂರು ಹಾಗೂ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆವೂರು ಆಶೀರ್ವಚನ ನೀಡಲಿದ್ದಾರೆ. ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಮಂಗಳೂರು ಶಿಲೆಶಿಲೆ ಮೊಕ್ತೇಸರರಾದ ಶ್ರೀ ರಾಘವೇಂದ್ರ ಶಾಸ್ತ್ರಿ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಸಭೆಗೆ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.), ಪುತ್ತೂರು ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತು ಇನ್ನಿತರ ಗಣ್ಯರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ಗಂಟೆ 7 ರಿಂದ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಇವರಿಂದ “ಶ್ರೀ ದೇವಿ ಮಹಾತ್ಮೆ” ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ.








