Sunday, July 19, 2026
spot_imgspot_img
spot_imgspot_img

ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ

- Advertisement -
- Advertisement -

ಪದ್ಯಾಣ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೆಶ್ವರ, ಶ್ರೀ ಚಕ್ರ ಹಾಗೂ ಶ್ರೀ ಮಹಾಗಣಪತಿ ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಾರ್ಚ್‌ 30ರಿಂದ ಏಪ್ರಿಲ್‌ 6ರವರೆಗೆ ಬ್ರಹ್ಮಶ್ರೀ ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅತ್ಯಂತ ವೈಭವದಿಂದ ನಡೆಯಲಿದೆ.

ಇಂದು(ಮಾರ್ಚ್30) ಬೆಳಿಗ್ಗೆಯಿಂದಲೇ ವೈದಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ಸಂಜೆ 4 ಗಂಟೆಗೆ ತಂತ್ರಿಗಳ ಕ್ಷೇತ್ರಾಗಮನ ಮತ್ತು ಪೂರ್ಣಕುಂಭ ಸ್ವಾಗತ ನಡೆಯಲಿದೆ. ಸಂಜೆ 5ರಿಂದ ಶಿಲ್ಪಿ ಮೇಸ್ತ್ರಿಗಳಿಂದ ಪರಿಗ್ರಹ, ದೇವತಾ ಪ್ರಾರ್ಥನೆ, ಆಚಾರ್ಯಾದಿ ಋತ್ವಿಗ್ವರಣೆ, ಸ್ವಸ್ತಿ ಪುಣ್ಯಾಹವಾಚನ, ಖನನಾದಿ ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ಅಂಕುರಾರೋಹಣ, ಅಸ್ತ್ರಕಲಶ ಪೂಜೆ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾಬಲಿ, ನೂತನ ಶಾಸ್ತಾರ ಲಿಂಗಗಳ ಜಲಾಧಿವಾಸ, ಪ್ರಾಕಾರ ಬಲಿ ಹಾಗೂ ರಾತ್ರಿ ಪೂಜೆಗಳು ನಡೆಯಲಿವೆ.

ಬೆಳಿಗ್ಗೆ 8.30ರಿಂದ 10.30ರವರೆಗೆ ಶ್ರೀ ರಾಮ ಭಜನಾ ಮಂಡಳಿ, ಕುರುಡಪದವು ಹಾಗೂ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ, ಕಣಿಯೂರು ಇವರಿಂದ ಭಜನೆ ಕಾರ್ಯಕ್ರಮ ನಡೆಯಲಿದೆ. 10.30ರಿಂದ ಮಧ್ಯಾಹ್ನ 12ರವರೆಗೆ ಶ್ರೀಮತಿ ಪಾರ್ವತಿ ಪದ್ಮನಾಭ ಬಳಗದವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಲಿದೆ.

ಸಂಜೆ 3.30ಕ್ಕೆ ಗ್ರಾಮ ದೈವಸ್ಥಾನ ಮಿತ್ತನಡ್ಕ ಶ್ರೀ ಮಲರಾಯ ದೈವಸ್ಥಾನದ ಸನ್ನಿಧಿಯಿಂದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿವಿಧ ಮಠಾಧೀಶರು, ಗಣ್ಯರು ಹಾಗೂ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನೃತ್ಯ ಭಜನಾ ತಂಡಗಳು, ಕೇರಳ ಚೆಂಡೆ, ಸಾಂಸ್ಕೃತಿಕ ಹಾಗೂ ಜಾನಪದ ನೃತ್ಯ ವೈಭವದೊಂದಿಗೆ ಆಕರ್ಷಕ ಹಸಿರುವಾಣಿ ಮೆರವಣಿಗೆ ನಡೆಯಲಿದೆ. ಉದ್ಘಾಟನೆಯನ್ನು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ಗುರುದೇವದತ್ತ ಸಂಸ್ಥಾನಂ, ಒಡಿಯೂರು ಇವರು ನೆರವೇರಿಸಲಿದ್ದಾರೆ.ದಿವ್ಯ ಉಪಸ್ಥಿತಿ ಪರಮಪೂಜ್ಯ ಯೋಗಿ ಕೌಸ್ತುಭ ಶ್ರೀ ಶ್ರೀ ಮೊಹನದಾಸ ಸ್ವಾಮೀಜಿ, ಶ್ರೀ ಧಾಮ ಮಾಣಿಲ, ಪರಮಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ , ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಕಣಿಯೂರು

ಸಂಜೆ 4.30ರಿಂದ ಸುಧರ್ಮ ಸಭೆಯು ಬಿಲ್ವ ಮಂಟಪ ಸಭಾ0ಗಣ , ಶಿವಾನುಗ್ರಹವೇದಿಕೆಯಲ್ಲಿ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದ0ಗಳವರು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀಮದ್ ಎಡನೀರು ಮಠ ನೆರವೇರಿಸಲಿದ್ದು, ಆಶೀರ್ವಚನವನ್ನು ಪರಮಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಶ್ರೀ ಸಂಪುಟ ನರಸಿಂಹಸ್ವಾಮಿ ಮಠ, ಸುಬ್ರಹ್ಮಣ್ಯ, ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು, ಪರಮಪೂಜ್ಯ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಶ್ರೀಧಾಮ ಮಾಣಿಲ ಹಾಗೂ ಪರಮಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಕಣಿಯೂರು ನೀಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಗುಳಿ ತಿರುಮಲೇಶ್ವರ ಭಟ್, ಆಡಳಿತ ಮೋಕ್ತೆಸರರು, ವಗೆನಾಡು ಸುಬ್ರಾಯ ದೇವಸ್ಥಾನ ಮತ್ತು ಶ್ರೀ ಮಲರಾಯ ದೈವಸ್ಥಾನ, ಕರೋಪಾಡಿ, ಧಾರ್ಮಿಕ ಉಪನ್ಯಾಸ ವೇದಮೂರ್ತಿ ಹಿರಣ್ಯ ವೆಂಕಟೇಶ್ವರ ಭಟ್ ಹಿರಿಯ ವೈದಿಕ ವಿದ್ವಾಂಸರು, ಶುಭಾಶಂಸನೆ ಶ್ರೀಮತಿ ಶ್ರದ್ದಾ ಅಮೀತ್, ಶ್ರೀ ಕ್ಷೇತ್ರ ಧರ್ಮಸ್ಥಳ ಅವರು ವಹಿಸಲಿದ್ದಾರೆ ಹಾಗೂ ಈ ಸಭೆಯಲ್ಲಿ ಹಲವು ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಜೆ 7 ಗಂಟೆಯಿಂದ ಜೂನಿಯರ್ ಶಂಕರ್ ಮತ್ತು ಬಳಗದವರಿಂದ ಗಿಲಿಗಿಲಿ ಮ್ಯಾಜಿಕ್ ಕಾರ್ಯಕ್ರಮ ನಡೆಯಲಿದೆ.

- Advertisement -

Related news

error: Content is protected !!