- Advertisement -
- Advertisement -



ಬಂಟ್ವಾಳ: ಬಂಟ್ವಾಳ ತಾಲೂಕಿನ ಪದ್ಯಾಣದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ “ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ” ಮಹೋತ್ಸವದ ಅಂಗವಾಗಿ ಧಾರ್ಮಿಕ ಭಾಷಣ ಕಾರ್ಯಕ್ರಮಕ್ಕೆ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಆಗಮಿಸಲಿದ್ದಾರೆ. ಏಪ್ರಿಲ್ 3ರಂದು ಶುಕ್ರವಾರ ಸಂಜೆ ಸುಮಾರು 4.30 ಗಂಟೆಗೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.



ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯುತ್ತಿರುವ ಈ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಹಾಗೂ ಕಾರ್ಯಕ್ರಮಗಳು ಜರುಗುತ್ತಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
- Advertisement -








