Sunday, April 28, 2024
spot_imgspot_img
spot_imgspot_img

ಪೇಯಿಂಟ್ ಶಾಪ್‌ನಲ್ಲಿ ಆಕಸ್ಮಿಕ ಬೆಂಕಿ…!

- Advertisement -G L Acharya panikkar
- Advertisement -
This image has an empty alt attribute; its file name is Bajaj-add-1024x718.jpg

ಪೇಯಿಂಟ್ ಶಾಪ್‌ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿ 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರು ನಗರದ ಬಳೆಪೇಟಯಲ್ಲಿ ನಡೆದಿದೆ.

ಪೇಯಿಂಟ್ ಶಾಪ್‌ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಹೊತ್ತಿನಲ್ಲಿ ಎರಡು ಅಂತಸ್ಥಿಗೆ ವ್ಯಾಪಿಸಿದೆ. ಎರಡು ಅಂತಸ್ಥಿನ ಕಟ್ಟದ ಹೊತ್ತಿ ಉರಿದಿದೆ. ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಅಂಗಡಿ ಕಳೆದುಕೊಂಡ ಕುಟುಂಬ ಕಣ್ಣೀರಿಟ್ಟಿದೆ. ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಕಟ್ಟಡದ ಒಳಗೆ ಪ್ರವೇಶಿಸಿ ಅಲ್ಲಿಯೇ ಸಿಲುಕಿದ್ದ ಯುವಕನನ್ನು ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಜೆಸಿಬಿ ಬಳಸಿ ಕಟ್ಟಡದ ಶಟರ್ ಮುರಿದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!