




ಪಾಕಿಸ್ತಾನದ ಬಣ್ಣವನ್ನು ಜಾಗತಿಕ ಮಟ್ಟದಲ್ಲಿ ಬಯಲು ಮಾಡಲು ಭಾರತ 7 ಸರ್ವಪಕ್ಷ ಸಂಸದರ ನಿಯೋಗವನ್ನು ವಿವಿಧ ದೇಶಗಳಿಗೆ ಕಳಿಸಲು ನಿರ್ಧರಿಸಿದ ಬೆನ್ನಲ್ಲೇ ಪಾಕಿಸ್ತಾನ ಕೂಡ ರಾಜತಾಂತ್ರಿಕರ ತಂಡವನ್ನು ಪ್ರಮುಖ ರಾಷ್ಟ್ರಗಳಿಗೆ ಕಳಿಸುವುದಾಗಿ ಘೋಷಿಸಿದೆ.
ವಿದೇಶಾಂಗ ಖಾತೆಯ ಮಾಜಿ ಸಚಿವ, ಪಿಪಿಪಿ ಪಕ್ಷದ ಅಧ್ಯಕ್ಷ ಬಿಲಾವರ್ ಭುಟ್ಟೋ ಅವರೊಂದಿಗಿನ ಸಂಭಾಷಣೆಯ ಬಳಿಕ ಪ್ರಧಾನಿ ಶೆಹಬಾಜ್ ಷರೀಫ್ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಪ್ರಧಾನಿ ಕಚೇರಿ ತಿಳಿಸಿದೆ. ಈ ಬಗ್ಗೆ ಪಾಕ್ ರೇಡಿಯೋ ವರದಿ ಮಾಡಿದ್ದು, ‘ಭಾರತದ ಸಂಚನ್ನು ಜಗಜ್ಜಾಹಿರಗೊಳಿಸುವ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯ ವಿಷಯದಲ್ಲಿ ಪಾಕ್‌ನ ನಿಲುವನ್ನು ವಿವರಿಸುವ ಸಲುವಾಗಿ, ಭುಟ್ಟೋ ನೇತೃತ್ವದ ನಿಯೋಗ ಪ್ರಮುಖ ದೇಶಗಳಿಗೆ ತೆರಳಲಿದೆ’ ಎಂದು ತಿಳಿಸಿದೆ.ಈ ನಿಯೋಗವು ಅಮೆರಿಕ, ಬ್ರಿಟನ್, ಬ್ರಸೆಲ್ಸ್, ಫ್ರಾನ್ಸ್ ಮತ್ತು ರಷ್ಯಾಗೆ ಹೋಗಲಿದೆ ಎಂದು ಉಪಪ್ರಧಾನಿಯೂ ಆಗಿರುವ ವಿದೇಶಾಂಗ ಸಚಿವ ಇಶಕ್ ದಾರ್ ಹೇಳಿದ್ದಾರೆ.ಶನಿವಾರವಷ್ಟೇ, ಭಯೋತ್ಪಾದನೆ ವಿರುದ್ಧದ ಭಾರತದ ಶೂನ್ಯ ಸಹಿಷ್ಣುತೆಯ ಸಂದೇಶವನ್ನು ಸಾರಲು, ಎಲ್ಲಾ ಪಕ್ಷದ ಸಂಸದರನ್ನೊಳಗೊಂಡ 7 ನಿಯೋಗಗಳನ್ನು ವಿದೇಶಗಳಿಗೆ ಕಳುಹಿಸಿಕೊಡುವ ಬಗ್ಗೆ ಭಾರತ ಘೋಷಿಸಿತ್ತು.