




ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಪ್ರವಾಸಿ ತಾಣವೊಂದರಲ್ಲಿ 26 ನಾಗರಿಕರನ್ನು ಬಲಿ ಪಡೆದ ಉಗ್ರರ ದಾಳಿ ನಂತರ ಪಾಕಿಸ್ತಾನ ಮತ್ತು ಭಾರತದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಇದೀಗ ಇದರ ಬೆನ್ನಲ್ಲೇ, ನಿನ್ನೆ ರಾತ್ರಿ ಪಾಕಿಸ್ತಾನಿ ಪಡೆಗಳು ನಿಯಂತ್ರಣ ರೇಖೆಯಾದ್ಯಂತ ಭಾರತೀಯ ಪೋಸ್ಟ್‌ಗಳ ಮೇಲೆ “ಅಪ್ರಚೋದಿತ” ಗುಂಡಿನ ದಾಳಿ ನಡೆಸಿದೆ. ನಿನ್ನೆ ತಡರಾತ್ರಿಯೂ ಪಾಕಿಸ್ತಾನಿ ಪಡೆಗಳು ಭಾರತೀಯ ಸೇನೆಯನ್ನು ಕೆಣಕಿವೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆ ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿದೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಭಾರತ ಮತ್ತು ಪಾಕಿಸ್ತಾನಿ ಸೈನ್ಯವನ್ನು ಬೇರ್ಪಡಿಸುವ ವಾಸ್ತವಿಕ ಗಡಿಯಾದ ನಿಯಂತ್ರಣ ರೇಖೆಯಾದ್ಯಂತದ ಅನೇಕ ಪೋಸ್ಟ್‌ಗಳಿಂದ ಗುಂಡಿನ ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ವರದಿ ಮಾಡಿದೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತೀಯ ಪಡೆಗಳು ಸೂಕ್ತವಾಗಿ ಪ್ರತಿದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.