Wednesday, July 29, 2026
spot_imgspot_img
spot_imgspot_img

*ಪಾಕ್ ಸೇನಾ ಹೆಲಿಕಾಪ್ಟರ್ ಪತನ; ಇಬ್ಬರು ಸೈನಿಕರು ಸ್ಥಳದಲ್ಲೇ ಸಾವು*

- Advertisement -
- Advertisement -

ಇಸ್ಲಾಮಾಬಾದ್: ಪಾಕ್ ಸೇನಾ ಹೆಲಿಕಾಪ್ಟರ್ ಪತನಗೊಂಡು, ಅದರಲ್ಲಿದ್ದ ನಾಲ್ವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ.
ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನದಲ್ಲಿ ಭಾನುವಾರ ಈ ದುರಂತ ಸಂಭವಿಸಿದೆ. ತಾಂತ್ರಿಕ ಕಾರಣಗಳಿಂದಾಗಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿರುವುದಾಗಿ ಪಾಕ್ ಸೇನೆಯ ಹೇಳಿಕೆ ತಿಳಿಸಿದೆ.

ಸೈನಿಕನೊಬ್ಬನ ಮೃತದೇಹವನ್ನು ಸ್ಕಾರ್ಡುವಿನಲ್ಲಿರುವ ಸೇನಾ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಹೆಲಿಕಾಪ್ಟರ್ ಅಸ್ಟೋರ್ ಜಿಲ್ಲೆಯ ಮಿನಿಮಾರ್ಗ್ ಪ್ರದೇಶದಲ್ಲಿ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಪೈಲಟ್, ಸಹ ಪೈಲಟ್ ಹಾಗೂ ಇತರ ಇಬ್ಬರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!