Sunday, June 29, 2025
spot_imgspot_img
spot_imgspot_img

ಹಿಂದೂಗಳ ನಕಲಿ ಹೆಸರಿಟ್ಟುಕೊಂಡು ಕರ್ನಾಟಕದಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳು ಪೊಲೀಸ್‌ ವಶ

- Advertisement -
- Advertisement -

ನಕಲಿ ದಾಖಲೆಗಳ ಜೊತೆಗೆ ಹಿಂದೂಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಇಂದು ಪೊಲೀಸರು ಬಂಧಿಸಿದ್ದಾರೆ.

ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ ತಿಳಿದುಬಂದಿದೆ. ಪಾಕ್ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ಜೊತೆ ವಿವಾಹವಾಗಿದ್ದಳು.

ಇನ್ನೊಬ್ಬ ಮೊಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈತ ಕೂಡ ಪಾಕಿಸ್ತಾನದವನಾಗಿದ್ದಾನೆ. ಹನೀಫ್ ಸೊಸೆ, ಮಗಳು, ಅಳಿಯನನ್ನೂ ಬಂಧಿಸಲಾಗಿದೆ.

ಬಂಧಿತರ ಪೈಕಿ ರಶೀದ್ ಅಲಿ ಸಿದ್ದಿಕಿ ಶಂಕರ್ ಶರ್ಮಾ (48) ಎಂದು ಹೆಸರಿಟ್ಟುಕೊಂಡಿದ್ದರೆ, ಆಯೇಷಾ ಹನೀಫ್ @ ಆಶಾ ಶರ್ಮಾ (38), ಮೊಹಮ್ಮದ್ ಹನೀಫ್ @ ರಾಮ್ ಬಾಬಾ ಶರ್ಮಾ (73) ರುಬೀನಾ @ ರಾಣಿ ಶರ್ಮಾ (61) ಎಂದು ಹೆಸರುಗಳನ್ನಿಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!