Wednesday, July 15, 2026
spot_imgspot_img
spot_imgspot_img

ವಿಟ್ಲ ಪಟ್ಟಣದ ಪ್ರಮುಖ ನಾಲ್ಕು ರಸ್ತೆಗಳ ಅಗಲೀಕರಣ ಕುರಿತು ಜು. 18ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಸಭೆ

- Advertisement -
- Advertisement -

ವಿಟ್ಲ ಪಟ್ಟಣದ ಪ್ರಮುಖ ನಾಲ್ಕು ರಸ್ತೆಗಳಾದ ಪುತ್ತೂರು ರಸ್ತೆ, ಉಕ್ಕುಡ ರಸ್ತೆ, ಸಾಲೆತ್ತೂರು ರಸ್ತೆ ಹಾಗೂ ಕಲ್ಲಡ್ಕ ರಸ್ತೆಗಳು ಪಟ್ಟಣದ ಹೃದಯಭಾಗದಲ್ಲಿ ಹಾದು ಹೋಗುತ್ತಿದ್ದು, ರಸ್ತೆ ಅಗಲ ಇಲ್ಲದಿರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಯ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ರಸ್ತೆಗಳ ಬದಿಯಲ್ಲಿರುವ ಕಟ್ಟಡಗಳ ಮಾಲೀಕರ ಸಭೆಯನ್ನು ನಡೆಸಲು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಸೂಚಿಸಿದ್ದಾರೆ.

ಅದರಂತೆ ಜುಲೈ 18ರಂದು ಸಂಜೆ 4 ಗಂಟೆಗೆ ವಿಟ್ಲ ಪಟ್ಟಣದ ವಿಠಲ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಂಬಂಧಿತ ರಸ್ತೆಗಳ ಬದಿಯಲ್ಲಿರುವ ಕಟ್ಟಡಗಳ ಮಾಲೀಕರು ಕಡ್ಡಾಯವಾಗಿ ಭಾಗವಹಿಸುವಂತೆ ಪ್ರಕಟಣೆ ಮೂಲಕ ತಿಳಿಸಲಾಗಿದೆ.

- Advertisement -

Related news

error: Content is protected !!