Monday, June 15, 2026
spot_imgspot_img
spot_imgspot_img

ಪಂಚಮಸಾಲಿ ಮೀಸಲಾತಿ ಹೋರಾಟ; ಐವರ ವಿರುದ್ಧ ಎಫ್​​ಐಆರ್..!

- Advertisement -
- Advertisement -

ಬೆಳಗಾವಿ: ಬೆಳಗಾವಿಯಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ನಡೆಸಿದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್​ಐಆರ್​ ದಾಖಲಾಗಿದೆ. ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಯತ್ನಸಿದ್ದಾರೆ. ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್‌ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿ ಕೇಸ್ ಪಿಐ ಆರ್.ಆರ್ ಪಾಟೀಲ್ ಅವರು ಕೇಸ್ ದಾಖಲಿಸಿಕೊಂಡಿದ್ದಾರೆ.

ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೀಸಲಾತಿ ಆಗ್ರಹಿಸಿ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಹೋರಾಟಗಾರರು ಸೌಧದ ಎದುರು ಪ್ರತಿಭಟನೆ ನಡೆಸಿದರು.

- Advertisement -

Related news

error: Content is protected !!