Tuesday, June 9, 2026
spot_imgspot_img
spot_imgspot_img

ಪಾಣೆಮಂಗಳೂರು: ಗ್ಯಾಸ್ ಟ್ಯಾಂಕರ್ ಮತ್ತು ಇಕೋ ಕಾರಿಗೆ ಮುಖಾಮುಖಿ ಢಿಕ್ಕಿ; ಆರು ಮಂದಿ ಗಂಭೀರ ಗಾಯ!

- Advertisement -
- Advertisement -

ಬಂಟ್ವಾಳ: ಪಾಣೆಮಂಗಳೂರು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಇಕೋ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ನಡೆದ ಪರಿಣಾಮ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

ಮೂಲ್ಕಿ ಸಮೀಪದ ಕಿನ್ನಿಗೋಳಿ ಐಕಳ ನಿವಾಸಿಗಳು ಸುಳ್ಯ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ ನರ್ತನ ಸೇವೆಗೆ ಡೋಲು ಬಾರಿಸುವ ಸೇವೆ ಸಲ್ಲಿಸಿದ ಬಳಿಕ ಬೆಳಿಗ್ಗೆ ವಾಪಸ್ಸು ಆಗುತ್ತಿದ್ದರು.

ಅವರು ಪಾಣೆಮಂಗಳೂರು ಸಮೀಪಿಸುತ್ತಿದ್ದಂತೆ ಎದುರಿನಿಂದ ಗ್ಯಾಸ್ ಟ್ಯಾಂಕರ್ ಲಾರಿಗೆ ಮುಖಾಮುಖಿ ಢಿಕ್ಕಿಯಾಗಿದೆ.

ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಪುಡಿಪುಡಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿಗೆ ಗಂಭೀರ ಗಾಯವಾಗಿದೆ. ಕಾರಿನಲ್ಲಿರುವ ಪ್ರಯಾಣಿಕರ ಹೆಸರು ಇನ್ನಷ್ಟೇ ತಿಳಿಯಬೇಕಾಗಿದೆ.

ಸ್ಥಳಕ್ಕೆ ಟ್ರಾಫಿಕ್ ಎಸ್‌ಐ.ರಾಜೇಶ್ ಮತ್ತು ತಂಡ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆ ಗೆ ದಾಖಲಿಸುವಲ್ಲಿ ಸಹಾಯ ಮಾಡಿದರು.

- Advertisement -

Related news

error: Content is protected !!