- Advertisement -
- Advertisement -



ಪಾಣೆಮಂಗಳೂರು: ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ಶಂಕರಯ್ಯ (50) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಶಂಕರಯ್ಯ ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದಿದ್ದು, ನೇತ್ರಾವತಿ ನದಿಗೆ ಹಾರಿದ್ದಾರೆ. ಕೂಡಲೇ ಈ ಕುರಿತು ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ ಸಿದ್ದೀಕ್ ಎಂ.ಕೆ.ರೋಡ್, ಶಂಕರಯ್ಯನನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ನಂತರ ಶಂಕರಯ್ಯನನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -