Friday, April 26, 2024
spot_imgspot_img
spot_imgspot_img

ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಸಜೀವ ದಹನ

- Advertisement -G L Acharya panikkar
- Advertisement -

ಪಂಜಾಬ್ (ಅ.23): ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಸಜೀವ ದಹನ ಮಾಡಿರುವ ಭೀಕರ ಘಟನೆ ಪಂಜಾಬ್’ನ ಹೋಶಿಯಾರ್’ಪುರದ ಜಲಾಲ್’ಪುರದಲ್ಲಿ ನಡೆದಿದೆ.

ಅರ್ಧ ಸುಟ್ಟು ಹೋಗಿರುವ ದೇಹ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿ ಗುರ್ ಪ್ರೀತ್ ಸಿಂಗ್ ಹಾಗೂ ಆತನ ಅಜ್ಜ ಸುರ್ಜಿತ್ ಸಿಂಗ್ ಇಬ್ಬರನ್ನೂ ಕೊಲೆ, ಅತ್ಯಾಚಾರದ ಆರೋಪದಡಿ ಮತ್ತು ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುರ್ ಪ್ರೀತ್ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ತಂದೆ ಆರೋಪಿಸಿದ್ದಾರೆ. ಆರೋಪಿಗಳ ಮನೆಯಲ್ಲೇ ಸಂತ್ರಸ್ತ ಬಾಲಕಿಯ ದೇಹ ಪತ್ತೆಯಾಗಿದೆ.

ಘಟನೆ ಕುರಿತು ಮಾತನಾಡಿರುವ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಇದು ತೀವ್ರ ಆಘಾತಕಾರಿ ಘಟನೆಯಾಗಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರೂ ತ್ವರಿತವಾಗಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಡಿಜಿಪಿಯವರಿಗೆ ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!