- Advertisement -
- Advertisement -
ಬಂಟ್ವಾಳ: ಪುದು ಗ್ರಾಮದ ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷ, ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಮುಹಮ್ಮದ್ ಬಾವ (72) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.

ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷರಾಗಿ 25ಕ್ಕೂ ಅಧಿಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದರು. ಕಿದ್ಮತ್ತುಲ್ ಇಸ್ಲಾಮ್ ಅಸೋಸಿಯೇಷನ್ ಫರಂಗಿಪೇಟೆ ಇದರ ಮುಂದಾಳತ್ವ ವಹಿಸಿದ್ದ ಮುಹಮ್ಮದ್ ಬಾವಾ ಅವರು ಈ ಸಂಘಟನೆಯ ಮೂಲಕ ಪ್ರತೀ ವರ್ಷ 10 ಜೋಡಿ ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ.

ಫರಂಗಿಪೇಟೆ ಜಮಾಅತ್ ನಲ್ಲಿ ನಡೆಯುವ ಎಲ್ಲಾ ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಅಲ್ಲದೆ ಪುದು ಗ್ರಾಮ ಪಂಚಾಯತ್ ಸದಸ್ಯರಾಗಿ, ಅಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
- Advertisement -