



ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗೀಪೇಟೆಯ ಮೆನೆಜಸ್ ಪ್ಲಾಜಾ (Menezes Plaza) ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್‌ನ ಫರಂಗೀಪೇಟೆ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಜುಲೈ 12ರ ರಾತ್ರಿ ವೇಳೆ ದುಷ್ಕರ್ಮಿಗಳು ಬ್ಯಾಂಕ್‌ನ ಮೇಲ್ಛಾವಣಿಯನ್ನು ತುಂಡರಿಸಿ ಒಳನುಗ್ಗಿರುವುದು ತಿಳಿದುಬಂದಿದೆ. ಸೋಮವಾರ ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿ ಶಾಖೆ ತೆರೆದಾಗ ಕಳ್ಳತನಕ್ಕೆ ಯತ್ನ ನಡೆದಿರುವುದು ಗಮನಕ್ಕೆ ಬಂದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು, ಬೆರಳಚ್ಚು ತಜ್ಞರ ತಂಡ ಹಾಗೂ ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಪ್ರಾಥಮಿಕ ತನಿಖೆಯಲ್ಲಿ ಬ್ಯಾಂಕ್‌ನಿಂದ ಯಾವುದೇ ನಗದು ಅಥವಾ ಬೆಲೆಬಾಳುವ ವಸ್ತುಗಳು ಕಳುವಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದ್ದು, ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.








