Friday, May 17, 2024
spot_imgspot_img
spot_imgspot_img

ಪ್ರೀತಿಗೆ ಪೋಷಕರ ವಿರೋಧ; ಚಲಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು..!!

- Advertisement -G L Acharya panikkar
- Advertisement -

ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ. ನವ್ಯ(19) ಹಾಗೂ ಹರ್ಷವರ್ಧನ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ನವ್ಯ ಹಾಗೂ ಹರ್ಷವರ್ಧನ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಇಬ್ಬರ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹಾಗಾಗಿ ನೊಂದ ಪ್ರೇಮಿಗಳು ಬೈಕ್ ನಲ್ಲಿ ಬಂದು ರಾಮನಗರ ಹೊರವಲಯದ ಕುಂಬಾಪುರ ಗೇಟ್ ಬಳಿ ಬೈಕ್ ನಿಲ್ಲಿಸಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈಲು ದೇಹದ ಮೇಲೆ ಹರಿದ ಪರಿಣಾಮ ದೇಹ ಛಿದ್ರ ಛಿದ್ರಗೊಂಡಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ರೈಲ್ವೇ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಚನ್ನಪಟ್ಟಣ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!