- Advertisement -
- Advertisement -
ಬೆಂಗಳೂರು: ಪಾರ್ಕ್ ಗೆ ವಾಕಿಂಗ್ ಗೆ ಬಂದಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಆರ್ ಟಿ ನಗರದಲ್ಲಿ ನಡೆದಿದೆ. ಕಣ್ಣೆದುರೆ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವುದನ್ನು ಕಂಡು ಜನರು ಭಯಭೀತರಾಗಿದ್ದಾರೆ.
ಇನ್ನು ವಿಷಯ ತಿಳಿದು ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹವನ್ನು ಆ್ಯಂಬುಲೆನ್ಸ್ ನಲ್ಲಿ ಶಿಫ್ಟ್ ಮಾಡಿದ್ದಾರೆ. ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೃತ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರಬಹುದೇ ಎಂಬ ಪ್ರಶ್ನೆ ಎದುರಾಗಿದೆ. ಇನ್ನು ಘಟನಾ ಸ್ಥಳಕ್ಕೆ ಆರ್ ಟಿ ನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಆರೋಗ್ಯ ಸಿಬ್ಬಂದಿ ತಿಳಿಸಿದ್ದಾರೆ.
- Advertisement -