Friday, April 26, 2024
spot_imgspot_img
spot_imgspot_img

ರಾಜ್ಯದಲ್ಲಿ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ: ಬಿ ಎಸ್ ವೈ ಟೀಮ್ ಗೆ ಏಳು ಹೊಸ ಮಂತ್ರಿಗಳು!

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಬುಧವಾರ ಮಧ್ಯಾಹ್ನ ರಾಜಭವನದಲ್ಲಿ ನಡೆಯಿತು. ಏಳು ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟವನ್ನು ಸೇರ್ಪಡೆಯಾಗಿ ಮಂತ್ರಿ ಪಟ್ಟ ಅಲಂಕರಿಸಿದರು.

ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ ಹೊಸದಾಗಿ ಮಂತ್ರಿಗಳಾದವರು.ಈ‌ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದಲ್ಲಿ ಸದ್ಯ ಸಚಿವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ನೂತನ ಸಚಿವರನ್ನು ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದಿಸಿದರು.

- Advertisement -

Related news

error: Content is protected !!