Friday, March 29, 2024
spot_imgspot_img
spot_imgspot_img

**ಪಿಯೂಷ್ ಹೆಗಲಿಗೆ ‘ಆಹಾರ’ದ ಹೊಣೆ**

- Advertisement -G L Acharya panikkar
- Advertisement -

ನವದೆಹಲಿ: ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ರಾಮ್ ವಿಲಾಸ್ ಪಾಸ್ವಾನ್ ಅವರು ನಿರ್ವಹಿಸುತ್ತಿದ್ದ ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.


ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪಿಯೂಷ್ ಗೋಯಲ್ ಅವರಿಗೆ ಈಗಿರುವ ಜವಾಬ್ದಾರಿ ಜೊತೆಗೆ ಹೆಚ್ಚುವರಿಯಾಗಿ ಈ ಖಾತೆಯ ಜವಾಬ್ದಾರಿ ನೀಡಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಪಿಯೂಷ್ ಗೋಯಲ್ ಅವರು ವಾಣಿಜ್ಯ ಹಾಗೂ ಕೈಗಾರಿಕೆ ಖಾತೆಯ ಸಚಿವರೂ ಆಗಿದ್ದಾರೆ.

- Advertisement -

Related news

error: Content is protected !!