Friday, May 3, 2024
spot_imgspot_img
spot_imgspot_img

ಮಂಗಳೂರು: ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟ ಪ್ರಕರಣ; ದ.ಕ ಜಿಲ್ಲೆಯ ಎಲ್ಲಾ ಪಟಾಕಿ ತಯಾರಿಕಾ ಘಟಕಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಡಿ.ಸಿ ಆದೇಶ

- Advertisement -G L Acharya panikkar
- Advertisement -

ಮಂಗಳೂರು: ಬೆಳ್ತಂಗಡಿಯ ವೇಣೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟ ಪ್ರಕರಣ ನಡೆದ ಕೂಡಲೇ ಎಚ್ಚೆತ್ತುಕೊಂಡ ಸರ್ಕಾರ ದಕ್ಷಿಣಕನ್ನಡ ಜಿಲ್ಲಾಡಳಿತ ಜಿಲ್ಲೆಯಲ್ಲಿ ಇರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ಪ್ರಭಾರ) ಡಾ.ಆನಂದ ಕೆ. ಅವರು ಜಿಲ್ಲೆಯಲ್ಲಿರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ನಿರ್ಬಂಧಿಸಿ ಅಮಾನತ್ತಿನಲ್ಲಿಡಲು ಆದೇಶಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ, ಸರ್ಕಾರದ ಮಾರ್ಗಸೂಚಿ ಪಾಲನೆಯ ಮರುಪರಿಶೀಲನೆಗಾಗಿ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ, ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರುಪರಿಶೀಲನೆಗೆ ಜಿಲ್ಲಾ ಮಟ್ಟದ ತನಿಖಾ ಸಮಿತಿ ರಚನೆ ಮಾಡಲಾಗಿದೆ.

ಮಂಗಳೂರು ಮತ್ತು ಪುತ್ತೂರು ಎಸಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ತಕ್ಷಣ ಸೀಲ್​ಡೌನ್ ಮಾಡಲು ಆದೇಶಿಸಲಾಗಿದೆ. ಬಳಿಕ ಸ್ಪೋಟಕ ಅಧಿನಿಯಮ ಮತ್ತು ಸರ್ಕಾರದ ಮಾರ್ಗಸೂಚಿ ಪಾಲನೆ ಬಗ್ಗೆ ಪರಿಶೀಲನೆ ನಡೆಸಿ ಫೆಬ್ರವರಿ 5ರ ಒಳಗಾಗಿ ಸಮಗ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!