Friday, June 27, 2025
spot_imgspot_img
spot_imgspot_img

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

- Advertisement -
- Advertisement -

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬಿ ಸಿ ಪಾಟೀಲ್ ದೊಡ್ಡ ಮಗಳ ಗಂಡ ಪ್ರತಾಪ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಪ್ರತಾಪ್ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ಹಿರಿಯ ಪುತ್ರಿ ಸೌಮ್ಯ ಅವರ ಪತಿಯಾಗಿರುವ ಪ್ರತಾಪ್ ಕುಮಾರ್ ಅವರು ದಾವಣಗೆರೆ ಕತ್ತಲಗೆರೆ ಗ್ರಾಮದವರು. ಸೌಮ್ಯ ಅವರು ಪ್ರತಾಪ್ ಕುಮಾರ್ ಅವರನ್ನು 15 ವರ್ಷದ ಹಿಂದೆ ವಿವಾಹವಾಗಿದ್ದರು. ಆದರೀಗ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿ ಬಂದಿದ್ದ ಪ್ರತಾಪ್ ಕುಮಾರ್ ಅವರು ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಬರುವ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ. ಇನ್ನು ಪ್ರತಾಪ್ ಕುಮಾರ್ ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

- Advertisement -

Related news

error: Content is protected !!