Thursday, May 9, 2024
spot_imgspot_img
spot_imgspot_img

ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪಾವಂಜೆಯ ಪ್ರದರ್ಶನ ಪ್ರಾರಂಭ-ಸರ್ಕಾರದ ನಿರ್ದೇಶನದಂತೆ ಪ್ರದರ್ಶನ

- Advertisement -G L Acharya panikkar
- Advertisement -

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ , ಪಾವಂಜೆಯ ಪ್ರದರ್ಶನ ಆರಂಭವಾಗಲಿದೆ ಎಂದು ಪಟ್ಲ ಸತೀಶ್ ಶೆಟ್ಟಿ ಹೇಳಿದರು.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಟ್ಲ ಸತೀಶ್ ಶೆಟ್ಟಿ ಮತ್ತು ಪಾವಂಜೆ ದೇವಳದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್, ನೂತನ ಮೇಳದ ಬಗ್ಗೆ ಮಾಹಿತಿ ನೀಡಿದರು.ಮೇಳದ ಯಕ್ಷಗಾನ ಪ್ರದರ್ಶನವು ಕಾಲಮಿತಿಯದ್ದಾಗಿದ್ದು, ಸಾಮಾನ್ಯವಾಗಿ ಸಂಜೆ 6 ಗಂಟೆಯಿಂದ 11ರವರೆಗಿನ ಅವಧಿಯಲ್ಲಿ ನಡೆಯಲಿದೆ. ಈ ಎಲ್ಲಾ ಪ್ರದರ್ಶನಗಳನ್ನು ಕೋವಿಡ್-19ರ ಪರಿಸ್ಥಿತಿಯಲ್ಲಿ ಸರಕಾರ ನೀಡುವ ನಿರ್ದೇಶನಗಳಿಗೆ ಒಳಪಟ್ಟು ನಡೆಸಲಾಗುವುದು ಎಂದಿದ್ದಾರೆ.

ಕಲಾವಿದರ ಪಟ್ಟಿ
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ , ಪಾವಂಜೆಯಲ್ಲಿ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಧಾನ ಭಾಗವತರಾಗಿದ್ದು, ಪ್ರಫುಲ್ಲಚಂದ್ರ ನೆಲ್ಯಾಡಿ ಭಾಗವತಿಕೆಯಲ್ಲಿ ಸಾಥ್ ನೀಡಲಿದ್ದಾರೆ. ಹಿಮ್ಮೇಳದಲ್ಲಿ ಪದ್ಮನಾಭ ಉಪಾಧ್ಯಾಯ, ಗುರುಪ್ರಸಾದ್ ಬೊಳ್ಳಿಂಜಡ್ಕ, ಪ್ರಶಾಂತ್ ವಗೆನಾಡು, ಪೂರ್ಣೇಶ್ ಆಚಾರ್ಯ ಇರಲಿದ್ದಾರೆ.

ಹಾಸ್ಯ ಪಾತ್ರಧಾರಿಗಳು: ಉಜಿರೆ ನಾರಾಯಣ, ಸಂದೇಶ್ ಮಂದಾರ
ಸ್ತ್ರೀ ಪಾತ್ರ: ಅಕ್ಷಯ್ ಕುಮಾರ್, ರಾಜೇಶ್ ನಿಟ್ಟೆ, ಯೋಗೀಶ್ ಕಡಬ, ವಿಶ್ವಾಸ್ ಕಾವೂರು
ಪ್ರಧಾನ ಪಾತ್ರ: ರಾಧಾಕೃಷ್ಣ ನಾವಡ, ದಿವಾಣ ಶಿವಶಂಕರ ಭಟ್, ಸಂತೋಷ್ ಮಾನ್ಯ, ರಾಕೇಶ್ ರೈ, ಸತೀಶ್ ನೈನಾಡು, ಮಾಧವ ಕೊಳ್ತಮಜಲು, ಮೋಹನ್ ಬೆಳ್ಳಿಪ್ಪಾಡಿ, ಮನೀಷ್ ಪಾಟಾಳಿ, ಲೋಕೇಶ ಮುಚ್ಚೂರು, ಹರಿರಾಜ್ ಕಿನ್ನಿಗೋಳಿ, ರೋಹಿತ್, ದಿವಾಕರ, ಲಕ್ಷಣ, ಮಧುರಾಜ್, ಭುವನ್ ಮತ್ತಿತರು.

- Advertisement -

Related news

error: Content is protected !!