Tuesday, June 9, 2026
spot_imgspot_img
spot_imgspot_img

ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ

- Advertisement -
- Advertisement -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣದ ಆರೋಪಿಗಳಾದ ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇನ್ನು ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಯು ನ.21 ಕ್ಕೆ ನಡೆಯಲಿದೆ. ಸದ್ಯ ಮಧ್ಯಂತರ ಜಾಮೀನು ಪಡೆದು ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಎಸ್‌ಪಿಪಿ ಪ್ರಸನ್ನಕುಮಾರ್ ಮನವಿ ಮಾಡಿದರು. ಈ ಹಿನ್ನೆಲೆ ಕೋರ್ಟ್ ನ.21 ರಂದು ಪವಿತ್ರಗೌಡ, ದರ್ಶನ್, ಅನುಕುಮಾರ್, ಲಕ್ಷ್ಮಣ್, ನಾಗರಾಜ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

- Advertisement -

Related news

error: Content is protected !!