Friday, August 7, 2026
spot_imgspot_img
spot_imgspot_img

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ..!

- Advertisement -
- Advertisement -

ಹಾವೇರಿ: 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ(PDO) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೆಗ್ಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

ಅಶೋಕ ಗೊಂದಿ ಬಂಧಿತ ತೆಗ್ಗಿಹಳ್ಳಿ ಗ್ರಾಮ ಪಂಚಾಯತಿ ಪಿಡಿಓ.

ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ ಬಳಿ ಹೊಟೇಲ್‌ನಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ ಅಶೋಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪಿಡಿಓ ಅಶೋಕ್, 1 ಲಕ್ಷ 60 ಸಾವಿರದ ಗೋದಾಮು ನಿರ್ಮಾಣ ಕಾಮಾಗಾರಿಯ ಬಿಲ್ ಮಂಜೂರು ಮಾಡಲು 80 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಚಿತವಾಗಿ 50,000 ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!