Monday, June 30, 2025
spot_imgspot_img
spot_imgspot_img

ಬಂಟ್ವಾಳ: ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪಾದಾಚಾರಿ ಸಾವು

- Advertisement -
- Advertisement -
This image has an empty alt attribute; its file name is creative2-1024x1024.jpeg

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ನಾಗರಾಜ (55) ಅಪಘಾತಕ್ಕೊಳಗಾಗಿ ಮೃತಪಟ್ಟ ದುರ್ದೈವಿ.

ಮಂಗಳೂರು ‌ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಬೈಕ್ ಸವಾರನೋರ್ವ ತುಂಬೆ ವೈಶಾಲಿ ವೈನ್ಸ್ ನ ಮುಂಭಾಗದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಾಗರಾಜ ಅವರಿಗೆ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ಪರಿಣಾಮ ಬೈಕ್ ಸವಾರನಿಗೂ ಸಣ್ಣಪುಟ್ಟ ಗಾಯವಾಗಿದೆ. ಹಾಗೂ ಪಾದಾಚಾರಿ ನಾಗರಾಜ ಅವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ಘಟನೆಗೆ ಬೈಕ್ ಸವಾರ ಅಜಾಗರೂಕತೆಯ ಚಾಲನೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!