Friday, June 5, 2026
spot_imgspot_img
spot_imgspot_img

ಕಾರ್ಕಳ: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ವೃದ್ಧ ಮೃತ್ಯು..!

- Advertisement -
- Advertisement -

ಕಾರ್ಕಳ: ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆಯ ವ್ಯಾಪ್ತಿಯ ಅಯ್ಯಪ್ಪ ನಗರ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಅಂಗಾರ (75) ಎಂದು ಗುರುತಿಸಲಾಗಿದೆ.

ಅಂಗಾರ ಕುಕ್ಕುಂದೂರು ಅಯ್ಯಪ್ಪ ನಗರದಿಂದ ಕುಕ್ಕುಂದೂರು ಜಲದುರ್ಗದ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರ್ಕಳ ಜೋಡುರಸ್ತೆಯಿಂದ ಅಯ್ಯಪ್ಪ ನಗರದ ಕಡೆಗೆ ಹೋಗುತ್ತಿದ್ದ ಕ್ರೇನ್ ಅಂಗಾರರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!