Monday, June 8, 2026
spot_imgspot_img
spot_imgspot_img

ವಿಟ್ಲ : ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಮೃತ್ಯು

- Advertisement -
- Advertisement -

ವಿಟ್ಲ : ಕೆಲಸ ಮುಗಿಸಿಕೊಂಡು ಮನೆ ಕಡೆ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯೋರ್ವರು ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ವಿಟ್ಲ ಕಸಬಾ ಗ್ರಾಮದ ನೀರಕಣಿ ಎಂಬಲ್ಲಿ ಸಂಭವಿಸಿದೆ.

ಮೃತ ಪಾದಚಾರಿ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಯಶೋಧರ (38) ಎಂದು ಗುರುತಿಸಲಾಗಿದೆ.

ಇವರು ರಾತ್ರಿ ಕೆಲಸ ಮುಗಿಸಿಕೊಂಡು ನಡೆದುಕೊಂಡು ಬರುತ್ತಿದ್ದ ವೇಳೆ ಶಫೀಕ್ ಎಂಬಾತನ ಚಲಾಯಿಸಿಕೊಂಡು ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಯಶೋಧರ ಅವರನ್ನು ತಕ್ಷಣ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೃತರ ಸಹೋದರ ಸುರೇಶ್ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!