Saturday, June 28, 2025
spot_imgspot_img
spot_imgspot_img

ಪೇಜಾವರ ಮಠದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ- ತಪ್ಪಿದ ಭಾರೀ ಅನಾಹುತ!

- Advertisement -
- Advertisement -

ಉಡುಪಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಉಡುಪಿಯ ಪೇಜಾವರ ಮಠದಲ್ಲಿ ನಡೆದಿದೆ. ಆದರೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಮಠದಲ್ಲಿ ಅಳವಡಿಸಲಾಗಿದ್ದ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಮಠದ ಸಿಬ್ಬಂದಿಗಳು ಕೂಡ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೇಜಾವರ ಸ್ವಾಮೀಜಿ ಅವರು ಈ ಸಂದರ್ಭದಲ್ಲಿ ಮಠದಲ್ಲಿ ಇರಲಿಲ್ಲ ಎಂದು ತಿಳದಿಬಂದಿದ್ದು, ಮಠದಲ್ಲಿನ ಪೀಠೋಪಕರಣ ಸೇರಿದಂತೆ ಯಾವುದೇ ರೀತಿಯಲ್ಲಿಯೂ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!