Thursday, July 30, 2026
spot_imgspot_img
spot_imgspot_img

ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ “ವೈ ಶ್ರೇಣಿ ಭದ್ರತೆ” ಮಂಜೂರು!

- Advertisement -
- Advertisement -

ಉಡುಪಿ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ಮುಖ್ಯಸ್ಥರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರ್ಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದ್ದು ಗುರುವಾರದಿಂದಲೇ ಭದ್ರತೆ ನೀಡಲಾಗುತ್ತಿದೆ.

ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್​ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಅದರಂತೆ ಸರ್ಕಾರ ಭದ್ರತೆ ಒದಗಿಸಿದ. ಈ ಹಿನ್ನೆಲೆ ಮನವಿಗೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ , ಗೃಹಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಭಟ್​​ ಹಾಗೂ ರಾಜ್ಯ ಪೋಲೀಸ್​​ ಮಹಾನಿರ್ದೇಶಕರಿಗೆ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ.

- Advertisement -

Related news

error: Content is protected !!