Tuesday, July 1, 2025
spot_imgspot_img
spot_imgspot_img

ಅರುಣಾಚಲ ಪ್ರದೇಶದ ಸಿಎಂ ಆಗಿ 3ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಪೆಮಾ ಖಂಡು..!

- Advertisement -
- Advertisement -

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕರಿಸಿದ್ದಾರೆ ಈ ಮೂಲಕ ಅವರು ಸತತ ಮೂರನೇ ಅವಧಿಗೆ ಮುಖ್ಯಮಂತ್ರಿ ಪದವಿ ಅಲಂಕರಿಸಿದ್ದಾರೆ.

ಪೆಮಾ ಅವರೊಂದಿಗೆ ಚೌನಾ ಮೀನ್ ಅರುಣಾಚಲ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ನಿವೃತ್ತ ಲೆಫ್ಟಿನೆಂಟ್ ಜನರಲ್ ಕೆ.ಟಿ.ಪರ್ನಾಯಕ್ ಅವರು ಪ್ರಮಾಣವಚನ ಬೋಧಿಸಿದರು. ಇವರೊಂದಿಗೆ 11 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಜೆಪಿ ನಡ್ಡಾ ಕೂಡ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಖಂಡು 2016ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. ಇದಕ್ಕೂ ಮುನ್ನ ಬುಧವಾರ ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಖಂಡು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

- Advertisement -

Related news

error: Content is protected !!