Tuesday, June 9, 2026
spot_imgspot_img
spot_imgspot_img

ಪೆನ್‌ ಡ್ರೈವ್ ಪ್ರಕರಣ: ಲಿಖಿತ್ ಗೌಡ, ಚೇತನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

- Advertisement -
- Advertisement -

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ್ ಗೌಡ ಹಾಗೂ ಚೇತನ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ. ಮೇ 12ರಂದು ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಲಿಖಿತ್ ಹಾಗೂ ಚೇತನ್‌ರನ್ನು ಎಸ್‌ಐಟಿ (SIT) ಪೊಲೀಸರು ವಶಕ್ಕೆ ಪಡೆದಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಸೋಮವಾರ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

- Advertisement -

Related news

error: Content is protected !!