- Advertisement -
- Advertisement -
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ರಾಜ್ಯ ಮಟ್ಟಕ್ಕೆ ಆಯ್ಕೆ






ಮಾಣಿ: ಪೆರಾಜೆ – ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 14 ರ ವಯೋಮಾನದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿ ಮಂಗಳೂರಿನಲ್ಲಿ ನಡೆಯಿತು.
ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿಂತನ್ 1000 ಮೀಟರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು, ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸ್ಕೇಟಿಂಗ್ ಸ್ಪರ್ಧೆ 500 ಮೀಟರ್ ವಿಭಾಗದಲ್ಲಿಯೂ ದ್ವಿತೀಯ ಸ್ಥಾನ ಪಡೆದಿರುವ ಈ ವಿದ್ಯಾರ್ಥಿ ಬಾಳ್ತಿಲ ನಿವಾಸಿಗಳಾದ ಲೋಕೇಶ್ ಮತ್ತು ರೇಖಾ ದಂಪತಿಗಳ ಪುತ್ರ.
- Advertisement -








