Sunday, November 8, 2026
spot_imgspot_img
spot_imgspot_img

ಪೆರ್ಡೂರು ಪ್ರದೀಪ್‌ ಪೂಜಾರಿ ಆತ್ಮಹತ್ಯೆ ಕೇಸ್‌ – ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಉತ್ತರ ಪ್ರದೇಶ ಮೂಲದ ಪವನ್ ಕುಮಾರ್ (24) ಎಂಬಾತನನ್ನು ಬಂಧಿಸಲಾಗಿದೆ. ಇದೇ ವೇಳೆ ಕಾನೂನು ಸಂಘರ್ಷಕ್ಕೆ ಒಳಗಾದ ಅಪ್ರಾಪ್ತ ಬಾಲಕನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು ಕಾರ್ಕಳದಲ್ಲಿ ಆದರ್ಶ ಕಾಂಚನ್ ಹಾಗೂ ದಿನೇಶ್ ಶೆಟ್ಟಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಪವನ್ ಕುಮಾರ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಪ್ರಾಪ್ತ ಬಾಲಕನನ್ನು ಪರಿವೀಕ್ಷಣಾಲಯಕ್ಕೆ ರವಾನಿಸಲಾಗಿದೆ. ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು, ಆರೋಪಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

- Advertisement -

Related news

error: Content is protected !!