Wednesday, May 8, 2024
spot_imgspot_img
spot_imgspot_img

ದ.ಕ.ಜಿಲ್ಲೆಯಲ್ಲಿ ಶಸ್ತ್ರಾಸ್ತ್ರಗಳನ್ನು ಪರಿಷ್ಕೃತವಾಗಿ ಠೇವಣಿಯಲ್ಲಿಡುವಂತೆ ಜಿಲ್ಲಾಧಿಕಾರಿ ಆದೇಶ

- Advertisement -G L Acharya panikkar
- Advertisement -

ಮಂಗಳೂರು: 2020 ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯಿತಿ ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹೊರತುಪಡಿಸಿ ಉಳಿದಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೊಳಪಟ್ಟ ಬೆಳೆ ರಕ್ಷಣೆಗಾಗಿ ಮತ್ತು ಆತ್ಮರಕ್ಷಣೆಗಾಗಿ ಪರವಾನಿಗೆ ಹೊಂದಿರುವ ಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸುವಂತೆ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಪರಿಷ್ಕೃತವಾಗಿ ಆದೇಶಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಬಂಟ್ವಾಳ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರವಾನಿಗೆದಾರರು ಡಿಸೆಂಬರ್ 10 ರೊಳಗೆ ಎಲ್ಲಾ ಶಸ್ತ್ರಾಸ್ತ್ರ ಠೇವಣಿಯನ್ನು ಇಡಬೇಕು.

ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಬೆಳ್ತಂಗಡಿ, ಸುಳ್ಯ ಪುತ್ತೂರು ಮತ್ತು ಕಡಬ ತಾಲೂಕಿಗೆ ಸಂಬಂಧಪಟ್ಟ ಎಲ್ಲಾ ಪರವಾನಿಗೆದಾರರು ಡಿಸೆಂಬರ್ 10 ರೊಳಗೆ ಎಲ್ಲಾ ಶಸ್ತ್ರಾಸ್ತ್ರಗಳನ್ನು ಠೇವಣಿ ಇಡಬೇಕು.


ಡಿಸೆಂಬರ್ 31 ರಂದು ಠೇವಣಿ ಇಡಲಾದ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆ / ಅಧೀಕೃತ ಕೋವಿ ಮತ್ತು ಮದ್ದುಗುಂಡು ಡೀಲರ್ ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬಹುದು. ಹಿಂದಿನ ಆದೇಶದಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪರವಾನಿಗೆದಾರರಿಗೆ ಬೆಳೆರಕ್ಷಣೆಗಾಗಿ ಶಸ್ತ್ರಾಸ್ತ್ರದ ತೀರಾ ಅವಶ್ಯಕತೆ ಇದ್ದರೆ ಮಾತ್ರ ಸಂಬಂಧಪಟ್ಟವರು ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಲು ತಿಳಿಸಲಾಗಿರುತ್ತದೆ.

ಇದಕ್ಕೆ ಬದಲಾಗಿ ಪರವಾನಿಗೆದಾರರು ಪ್ರತಿ ತಾಲೂಕುಗಳಲ್ಲಿ (ತಹಶೀಲ್ದಾರರ ಕಚೇರಿ) ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗಳಿಗೆ ಅಹವಾಲುಗಳನ್ನು ಸಲ್ಲಿಸಬಹುದು. ಈ ಸ್ಕ್ರೀನಿಂಗ್ ಸಮಿತಿಗಳಿಗೆ ಅಹ೯ ಪ್ರಕರಣಗಳಲ್ಲಿ ಶಸ್ತ್ರಾಸ್ತ್ರಗಳನ್ನು ಹಾಗೂ ಆತ್ಮ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದ್ದರೆ ಸಂಬಂಧಪಟ್ಟವರು ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ಅವಕಾಶ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!