Sunday, June 14, 2026
spot_imgspot_img
spot_imgspot_img

ಇಡ್ಕಿದು : ಇಡ್ಕಿದು ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಮನವಿ ಸಲ್ಲಿಕೆ

- Advertisement -
- Advertisement -

ಇಡ್ಕಿದು : ಬಂಟ್ವಾಳ ತಾಲೂಕು ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಬೇಡಿಕೆಗಳನ್ನು ಈಡೇರಿಸಲು ಮನವಿಯನ್ನು ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನೂತನವಾಗಿ ಆರಂಭಗೊಂಡ ಸಂಸದರ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಸದರನ್ನು ಗ್ರಾಮದ ಜನತೆಯ ಪರವಾಗಿ ಅಭಿನಂದಿಸಲಾಯಿತು ಈ ಸಂದರ್ಭದಲ್ಲಿ ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ ಜಯಕರ್.. ಉಪಾಧ್ಯಕ್ಷರಾದ ಪದ್ಮನಾಭ ಸಪಲ್ಯ.. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಕೋಶಾಧಿಕಾರಿ ರಮೇಶ್ ಭಟ್ ಎಂ ಎಚ್.. ಕ್ಯಾಂಪ್ಕೋ ಮಾಜಿ ಅಧ್ಯಕ್ಷರಾದ ಕೊಂಕೋಡಿ ಪದ್ಮನಾಭ. ಪ್ರಪುಲ್ಲ ಚಂದ್ರ ಪಿ. ಜಿ ಕೋಲ್ಪೆ. ದೇಜಪ್ಪ ಕೋಲ್ಪೆ. ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ. ಭಾಗೀರಥಿ ಕೊಪ್ಪಳ .. ಇಡ್ಕಿದು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರು ಮತ್ತು ಪಂಚಾಯತ್ ಸದಸ್ಯರಾದ ಯಂ ಸುಧೀರ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು

- Advertisement -

Related news

error: Content is protected !!