Tuesday, July 1, 2025
spot_imgspot_img
spot_imgspot_img

ಪೆಟ್ರೋಲ್ ಮತ್ತು ಡೀಸೆಲ್​ನ್ನು ಜಿ ಎಸ್ ಟಿ ವ್ಯಾಪ್ತಿಗೆ ತರುವ ಬಗ್ಗೆ ಚರ್ಚೆಗೆ ಸಿದ್ಧ- ನಿರ್ಮಲಾ ಸೀತಾರಾಮನ್

- Advertisement -
- Advertisement -

ನವದೆಹಲಿ: ವಾಹನಗಳಿಗೆ ಬಳಸುವ ಇಂಧನಗಳನ್ನ ಜಿಎಸ್​ಟಿ ವ್ಯಾಪ್ತಿಗೆ ತರುವ ಕುರಿತು ಮುಂದಿನ ಕೌನ್ಸಿಲ್ ಸಭೆಯಲ್ಲಿ ಮಾತನಾಡಲು ನಾವು ತಯಾರಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ವಾಹನಗಳಿಗೆ ಬಳಸುವ ಇಂಧನಗಳ ಮೇಲೆ ಕೇಂದ್ರ ಸರ್ಕಾರವಷ್ಟೇ ತೆರಿಗೆಯನ್ನು ಹೇರುವುದಿಲ್ಲ. ರಾಜ್ಯ ಸರ್ಕಾರಗಳೂ ಸಹ ತೆರಿಗೆಯನ್ನ ಹೇರುತ್ತವೆ ಎಂದಿರುವ ನಿರ್ಮಲಾ ಸೀತಾರಾಮನ್, ಪೆಟ್ರೋಲ್ ಮತ್ತು ಡೀಸೆಲ್​ನ್ನು ಜಿಎಸ್​ಟಿ ಅಡಿಗೆ ತರಲು ಮುಂದಿನ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಲು ನಾವು ತಯಾರಿದ್ದೇವೆ ಎಂದು ಹೇಳಿದ್ದಾರೆ.

ಈ ಹಿಂದಿನಿಂದಲೂ ಪೆಟ್ರೋಲ್ ಮತ್ತು ಡೀಸೆಲ್​ನ್ನು ಜಿಎಸ್​ಟಿ ವ್ಯಾಪ್ತಿಗೆ ತರುವ ಕುರಿತು ಕೇಂದ್ರ ಮತ್ತು ರಾಜ್ಯಗಳ ನಡುವೆ ಭಿನ್ನಾಭಿಪ್ರಾಯಗಳು ಕೇಳಿಬಂದಿವೆ. ಇಂಧನದ ಮೇಲೆ ಜಿಎಸ್​ಟಿ ವಿಧಿಸಿದರೆ ಇದರಿಂದ ರಾಜ್ಯಗಳಿಗೆ ಬರುವ ತೆರಿಗೆಗೆ ಕೊಕ್ಕೆ ಬೀಳಲಿದೆ ಎಂದು ರಾಜ್ಯ ಸರ್ಕಾರಗಳು ವಾದಿಸುತ್ತಾ ಬಂದಿವೆ.

- Advertisement -

Related news

error: Content is protected !!