Monday, June 24, 2024
spot_imgspot_img
spot_imgspot_img

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ;

- Advertisement -G L Acharya panikkar
- Advertisement -

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಶನಿವಾರ ಪ್ರಕಟಿಸಿದೆ. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಲಿದೆ. ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗುತ್ತಿದೆ.

ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಶನಿವಾರ (ಜೂನ್ 15) ಮಧ್ಯಾಹ್ನ ಹೊರಡಿಸಿರುವ ಸುತ್ತೋಲೆಯಲ್ಲಿ ಸರ್ಕಾರ ಉಲ್ಲೇಖಿಸಿದೆ.

ಬೆಂಗಳೂರಿನಲ್ಲಿ ಪ್ರಸ್ತುತ ಒಂದು ಲೀಟರ್ ಪೆಟ್ರೋಲ್ ದರ 99.84 ರೂ. ಆಗಿದ್ದು, ಡೀಸೆಲ್‌ ದರ ಲೀಟರ್‌ಗೆ 85.93 ರೂ. ಆಗಿದೆ. ಇದೀಗ ತೆರಿಗೆ ಹೆಚ್ಚಳದ ಬಳಿಕ ಪೆಟ್ರೋಲ್‌ ದರ ಲೀಟರ್‌ಗೆ 102.84 ರೂ. ಆಗಲಿದೆ. ಡೀಸೆಲ್‌ ದರ ಲೀಟರ್‌ಗೆ 89.43 ರೂ. ಆಗಲಿದೆ. ಸಾಗಾಟ ವೆಚ್ಚಕ್ಕನುಗುಣವಾಗಿ ದರ ವ್ಯತ್ಯಾಸವಾಗುವುದರಿಂದ ವಿವಿಧ ಜಿಲ್ಲೆಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ದರ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

ಲೋಕಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಮುಕ್ತಾಯಗೊಂಡು ಫಲಿತಾಂಶ ಪ್ರಕಟವಾಗಿ ಚುನಾವಣಾ ನೀತಿ ಸಂಹಿತೆ ಕೊನೆಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಇಲಾಖೆಗಳ ಜತೆ ಸಮಾಲೋಚನೆ ನಡೆಸಿದ್ದರು. ಆದಾಯ ಹೆಚ್ಚಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಿದ್ದರು. ಸರ್ಕಾರ ಈಗಾಗಲೇ ಮದ್ಯ ಮಾರಾಟದ ಮೇಲೆ ತೆರಿಗೆ ಹೆಚ್ಚಳ ಮಾಡಿದೆ. ವಾಹನ, ರಸ್ತೆ ತೆರಿಗೆ ಹೆಚ್ಚಳದ ಆಯ್ಕೆಯೂ ಸರ್ಕಾರದ ಮುಂದಿಲ್ಲ. ಹೀಗಾಗಿ ಇದೀಗ ಪೆಟ್ರೋಲ್ ಹಾಗೂ ಡೀಸೆಲ್ ಚಿಲ್ಲರೆ ಮಾರಾಟದ ಮೇಲಿನ ತೆರಿಗೆ ಹೆಚ್ಚಳದ ಮೂಲಕ ಬೊಕ್ಕಸ ತುಂಬಿಸಲು ಮುಂದಾಗಿದೆ.

- Advertisement -

Related news

error: Content is protected !!