Wednesday, July 22, 2026
spot_imgspot_img
spot_imgspot_img

ಪೆಟ್ರೋಲ್-ಡೀಸೆಲ್ ಕೊರತೆ; ವದಂತಿಗಳಿಗೆ ಕಿವಿಗೊಡಬೇಡಿ : ಪೆಟ್ರೋಲ್ ಬಂಕ್‌ಗಳಲ್ಲಿ ಬಾಟಲಿ ಹಾಗೂ ಕ್ಯಾನ್‌ಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಇಂಧನ ಸಂಗ್ರಹಿಸುತ್ತಿರುವುದು ತಪ್ಪು – ಆಹಾರ, ನಾಗರಿಕ ಪೂರೈಕೆ ಇಲಾಖೆ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು : ‘ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿದೆ ಎಂಬ ವದಂತಿಗಳಿಗೆ ಸಾರ್ವಜನಿಕರು ಕಿವಿಗೂಡಬಾರದು. ಕೇಂದ್ರ ಸರಕಾರದಿಂದ ಚಿಲ್ಲರೆ ಮಾರಾಟ ಮಳಿಗೆಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಸುಗಮವಾಗಿ ನಡೆಯುತ್ತಿದೆ. ಹೀಗಾಗಿ ಯಾವುದೇ ರೀತಿಯ ಕೊರತೆ ಉಂಟಾಗಿಲ್ಲ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸ್ಪಷ್ಟನೆ ನೀಡಿದೆ.ಬುಧವಾರ ಈ ಸಂಬಂಧ ಪ್ರಕಟಣೆ ನೀಡಿರುವ ಆಹಾರ ಇಲಾಖೆ,

ಪೆಟ್ರೋಲ್‌ ಮತ್ತು ಡೀಸೆಲ್ ಕೊರತೆ ಬಗ್ಗೆ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವದಂತಿಗಳು ಹರಿದಾಡುತ್ತಿವೆ. ಹೀಗಾಗಿ ಸಾರ್ವಜನಿಕರು ಆತಂಕಕ್ಕೊಳಗಾಗಿ ಪೆಟ್ರೋಲ್ ಬಂಕ್‌ಗಳಲ್ಲಿ ಬಾಟಲಿ ಹಾಗೂ ಕ್ಯಾನ್‌ಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಇಂಧನ ಸಂಗ್ರಹಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ.

ಇಂಧನ ಕೊರತೆಯ ಬಗ್ಗೆ ಹರಡುತ್ತಿರುವ ಸುದ್ದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಚಿಲ್ಲರೆ ಮಾರಾಟ ಮಳಿಗೆಗಳು ವಾಹನಗಳ ಟ್ಯಾಂಕ್‌ಗಳಿಗೆ ಮಾತ್ರ ನೇರವಾಗಿ ಇಂಧನವನ್ನು ಪೂರೈಸುತ್ತವೆ. ಯಾವುದೇ ರೀತಿಯ ಕ್ಯಾನ್-ಬಾಟಲಿಯಲ್ಲಿ ಇಂಧನ ಪೂರೈಸಲು ಅವಕಾಶವಿಲ್ಲ. ಪ್ರತ್ಯೇಕ ಕಂಟೈನಲ್ಗಳಲ್ಲಿ ಇಂಧನ ಸಂಗ್ರಹಿಸುವುದು ಅಪಾಯಕಾರಿ, ಅನಾಹುತಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.ಕಟ್ಟುನಿಟ್ಟಿನ ಸೂಚನೆ: ಇಂಧನವನ್ನು ಕೇವಲ ವಾಹನಗಳಟ್ಯಾಂಕ್‌ಗಳಿಗೆ ಮಾತ್ರ ಭರ್ತಿ ಮಾಡಬೇಕು. ಬಾಟಲಿ ಅಥವಾ ಪ್ರತ್ಯೇಕ ಕಂಟೈನಲ್ಗಳಲ್ಲಿ ಇಂಧನ ನೀಡದಂತೆ ಪೆಟ್ರೋಲ್‌ ಬಂಕ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಸಹಕರಿಸಿ, ಅಗತ್ಯಕ್ಕಿಂತ ಹೆಚ್ಚಿನ ಇಂಧನವನ್ನು ಸಂಗ್ರಹಿಸಿ ಆತಂಕ ಸೃಷ್ಟಿಸಬಾರದೆಂದು ಈ ಮೂಲಕ ವಿನಂತಿಸಲಾಗಿದೆ ಎಂದು ಆಹಾರ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ನಾಗರಾಜ್ ಬಿ.ಇ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!