Sunday, October 4, 2026
spot_imgspot_img
spot_imgspot_img

ಪೆಟ್ರೋಲ್ ಲೀಟರ್‌ಗೆ 5 ರೂ., ಡೀಸೆಲ್‌ಗೆ 3 ರೂ. ಏರಿಕೆ: ದರ ಹೆಚ್ಚಿಸಿದ ನಯಾರಾ ಎನರ್ಜಿ

- Advertisement -
- Advertisement -

ನವದೆಹಲಿ: ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಮತ್ತು ಇಂಧನ ಉತ್ಪನ್ನಗಳ ಬೆಲೆ ಏರಿಕೆಯು ಚಿಲ್ಲರೆ ಮಾರಾಟದ ಲಾಭಾಂಶದ ಮೇಲೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ, ಖಾಸಗಿ ಇಂಧನ ಮಾರಾಟ ಸಂಸ್ಥೆಯಾದ ‘ನಯಾರಾ ಎನರ್ಜಿ’ ಶನಿವಾರದಿಂದ ಜಾರಿಗೆ ಬರುವಂತೆ ದೇಶಾದ್ಯಂತ ತನ್ನ ಕೇಂದ್ರಗಳಲ್ಲಿ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 5 ರೂಪಾಯಿ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 3 ರೂಪಾಯಿಯಷ್ಟು ಹೆಚ್ಚಿಸಿದೆ.

ಅಂತರರಾಷ್ಟ್ರೀಯ ಇಂಧನ ಬೆಲೆಗಳಲ್ಲಿನ ನಿರಂತರ ಏರಿಕೆಯ ನಡುವೆ, ಚಿಲ್ಲರೆ ಇಂಧನ ಬೆಲೆಗಳು ಮತ್ತು ಹೆಚ್ಚಿನ ಖರೀದಿ ವೆಚ್ಚಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಯಾರಾದ 7,000ಕ್ಕೂ ಹೆಚ್ಚು ಇಂಧನ ಕೇಂದ್ರಗಳಲ್ಲಿ ಪರಿಷ್ಕೃತ ದರಗಳನ್ನು ಜಾರಿಗೆ ತರಲಾಗಿದೆ. ಈ ವರ್ಷ ಇಲ್ಲಿಯವರೆಗೆ ನಯಾರಾ ಮಾಡಿರುವ ಎರಡನೇ ಪರಿಷ್ಕರಣೆ ಇದಾಗಿದೆ.

ಇದಕ್ಕೂ ಮುನ್ನ ಮಾರ್ಚ್‌ನಲ್ಲಿ, ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇದೇ ಪ್ರಮಾಣದಲ್ಲಿ ಹೆಚ್ಚಿಸಿತ್ತು. ಆದರೆ, ಕಚ್ಚಾ ತೈಲದ ಬೆಲೆಗಳು ಇಳಿಕೆಯಾದ ನಂತರ ಜುಲೈನಲ್ಲಿ ಬೆಲೆ ಏರಿಕೆಯನ್ನು ಹಿಂಪಡೆದಿತ್ತು.‌

ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಏರಿಳಿತಗಳಿದ್ದರೂ, ಭಾರತದ 1,04,000ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳ ಪೈಕಿ ಶೇ.90ಕ್ಕೂ ಹೆಚ್ಚಿನ ಪಾಲನ್ನು ಹೊಂದಿರುವ ಸರ್ಕಾರಿ ಸ್ವಾಮ್ಯದ ಇಂಧನ ಮಾರಾಟಗಾರರು ಚಿಲ್ಲರೆ ಮಾರಾಟ ದರಗಳನ್ನು ಬಹುತೇಕ ಸ್ಥಿರವಾಗಿ ಕಾಯ್ದುಕೊಂಡಿದ್ದಾರೆ. ಈ ಹೊತ್ತಲ್ಲೇ ನಯಾರಾ ಎನರ್ಜಿ ಬೆಲೆ ಏರಿಕೆ ಮಾಡಿದೆ.

ಈ ವಾರದ ಆರಂಭದಲ್ಲಿ, ಖಾಸಗಿ ಇಂಧನ ಮಾರಾಟಗಾರರು ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವನ್ನು ನಿರ್ಬಂಧಿಸಬಾರದು ಎಂದು ಸರ್ಕಾರ ಹೇಳಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!