Tuesday, June 23, 2026
spot_imgspot_img
spot_imgspot_img

ಪಾದಾಚಾರಿಗಳ‌ ಮೇಲೆ ಹರಿದ ಪೆಟ್ರೋಲ್ ಟ್ಯಾಂಕರ್; ಓರ್ವ ಮಹಿಳೆ ಮೃತ್ಯು..!

- Advertisement -
- Advertisement -

ಇಬ್ಬರು ಪಾದಾಚಾರಿಗಳ‌ ಮೇಲೆ ಪೆಟ್ರೋಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ಮಹಿಳೆ ಸಾವನ್ನಪ್ಪಿದ್ದು ಇನ್ನೋರ್ವ ಮಹಿಳೆ ಗಾಯಗೊಂಡ ಘಟನೆ ಬಳ್ಳಾರಿಯ ಮೋತಿ ಸರ್ಕಲ್​ನಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ರಫಿಯಾಬೇಗಂ (26) ಹಾಗೂ ಗಾಯಗೊಂಡ ಮಹಿಳೆ ಸಬೀನಾ ಎಂದುಗುರುತಿಸಲಾಗಿದೆ.

ಈ ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರಿಗೆ ಪೆಟ್ರೋಲ್ ಟ್ಯಾಂಕರ್ ಏಕಾಏಕಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಯುವತಿಗೆ ತೊಡೆಯ ಭಾಗಕ್ಕೆ ಗಂಭೀರವಾಗಿ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಳ್ಳಾರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬಳ್ಳಾರಿ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!