Thursday, May 2, 2024
spot_imgspot_img
spot_imgspot_img

ವಿವಾಹಿತ ಮಹಿಳೆ ಜೊತೆ ಸಲುಗೆ ಬೆಳೆಸಿದ್ದ ಯುವಕ; ಫೋಟೋ ವೈರಲ್ ಬಳಿಕ ಇಬ್ಬರು ನೇಣು ಬಿಗಿದು ಆತ್ಮಹತ್ಯೆ..!

- Advertisement -G L Acharya panikkar
- Advertisement -

ವಿವಾಹಿತ ಮಹಿಳೆಯೊಂದಿಗೆ ಯುವಕ ಸಲುಗೆ ಬೆಳೆಸಿದ್ದು , ಸಾಮಾಜಿಕ ಜಾಲತಾಣದಲ್ಲಿ ಮಹಿಳೆ ಹಾಗೂ ಯುವಕನ ಫೋಟೋ ವೈರಲ್ ಆಗಿದ್ದು ಇದರಿಂದ ಹೆದರಿ ಮಹಿಳೆ ಮತ್ತು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಹುಣಸೂರು ಪಟ್ಟಣದ ಕಲ್ಕುಣಿಗೆ ನಿವಾಸಿಗಳಾದ ಶೃತಿ(28), ಮುರಳಿ(20) ಆತ್ಮಹತ್ಯೆ ಮಾಡಿಕೊಂಡವರು.

ವಿವಾಹಿತ ಮಹಿಳೆ ಜೊತೆ ಯುವಕ ಸಲುಗೆಯಿಂದ ಇದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಫೋಟೋ ಕಣ್ಣಿಗೆ ಬೀಳುತ್ತಿದ್ದಂತೆ ಮನನೊಂದ ಗೃಹಿಣಿ ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃತಿ ಆತ್ಮಹತ್ಯೆ ಬೆನ್ನಲ್ಲೇ ಮುರಳಿ ಕೂಡ ನೇಣಿಗೆ ಶರಣಾಗಿದ್ದಾನೆ. ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಮುರಳಿ, ಶೃತಿ ಜೊತೆ ಇದ್ದ ಫೋಟೋವನ್ನು ಅಪ್​ಲೋಡ್ ಮಾಡಿ ​​​ಸ್ಟೇಟಸ್​ನಲ್ಲಿ ಇಟ್ಟುಕೊಂಡಿದ್ದ. ಈ ಫೋಟೋ ವೈರಲ್ ಆಗಿದೆ. ಬಳಿಕ ಇದು ಶೃತಿ ಹಾಗೂ ಮುರಳಿ ಮನೆಯವರಿಗೂ ಮುಟ್ಟಿದೆ. ಇದೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ಆಗಿದೆ. ಇದರಿಂದ ಹೆದರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎರಡೂ ಕುಟುಂಬದವರು ಪರಸ್ಪರ ದೂರು ನೀಡಿದ್ದಾರೆ.

- Advertisement -

Related news

error: Content is protected !!